ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
Cross references
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
ನನ್ನ ಹೃದಯವು ಒಂದು ದಿವ್ಯ ವಿಷಯವನ್ನು ರಚಿಸುತ್ತಿರುವದು; ಅರಸನನ್ನು ಕುರಿತು ನಾನು ಮಾಡಿದವುಗಳನ್ನು ವಿವರಿಸುತ್ತೇನೆ; ನನ್ನ ನಾಲಿಗೆಯು ಬರೆಯುವವನ ಲೇಖನಿಯಂತೆ ಸಿದ್ಧವಾಗಿದೆ.
ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನಿನ್ನ ಜನರ ಅಕ್ರಮವನ್ನು ಪರಿಹರಿಸಿದ್ದೀ; ಅವರ ಪಾಪವನ್ನೆಲ್ಲಾ ಮುಚ್ಚಿದ್ದೀ ಸೆಲಾ.
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.