Home Bibles ಕೀರ್ತನೆಗಳು 33:1 · ಕನ್ನಡ ಬೈಬಲ್
ಕೀರ್ತನೆಗಳು 33:1 · ಕನ್ನಡ ಬೈಬಲ್

ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.

Cross references

ಕೀರ್ತನೆಗಳು 32:11

ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.

ಕೀರ್ತನೆಗಳು 50:14

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

ಕೀರ್ತನೆಗಳು 78:36

ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.

ಕೀರ್ತನೆಗಳು 97:12

ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

ಕೀರ್ತನೆಗಳು 118:15

ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.

ಕೀರ್ತನೆಗಳು 135:3

ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.

ಕೀರ್ತನೆಗಳು 147:1

ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.

ಸಾಮೇತಿಗಳು 15:8

ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

ರೋಮಾಪುರದವರಿಗೆ 3:10

ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;

ರೋಮಾಪುರದವರಿಗೆ 5:19

ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.

1 ಕೊರಿಂಥದವರಿಗೆ 1:30

ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

ಫಿಲಿಪ್ಪಿಯವರಿಗೆ 4:4

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.

Interlinear

Choose Theme