ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.