ಕರ್ತನ ವಾಕ್ಯವು ಯಥಾರ್ಥವಾದದ್ದು. ಆತನ ಕೆಲಸಗಳೆಲ್ಲಾ ಸತ್ಯದಲ್ಲಿ ಮಾಡಲ್ಪಟ್ಟಿವೆ.
Cross references
ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?