ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು.
ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.
ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ;
ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ