ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
Cross references
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.