Home Bibles ಕೀರ್ತನೆಗಳು 35:13 · ಕನ್ನಡ ಬೈಬಲ್
ಕೀರ್ತನೆಗಳು 35:13 · ಕನ್ನಡ ಬೈಬಲ್

ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.

Cross references

ಲೇವ್ಯಕಾಂಡ 16:29

ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.

ಲೇವ್ಯಕಾಂಡ 16:31

ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.

1 ಅರಸುಗಳು 21:27

ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.

ಯೋಬ 30:25

ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?

ಕೀರ್ತನೆಗಳು 69:10

ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.

ಕೀರ್ತನೆಗಳು 69:12

ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.

ಯೆಶಾಯ 58:3

ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.

ಯೆಶಾಯ 58:5

ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?

ಮತ್ತಾಯ 5:44

ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.

ಮತ್ತಾಯ 9:14

ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.

ಮತ್ತಾಯ 10:13

ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.

ಲೂಕ 10:6

ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.

ರೋಮಾಪುರದವರಿಗೆ 12:14

ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.

Interlinear

Choose Theme