ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
Cross references
ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.