ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
Cross references
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.