ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
Cross references
ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.