Home Bibles ಕೀರ್ತನೆಗಳು 37:27 · ಕನ್ನಡ ಬೈಬಲ್
ಕೀರ್ತನೆಗಳು 37:27 · ಕನ್ನಡ ಬೈಬಲ್

ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.

Cross references

ಯೋಬ 28:28

ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

ಕೀರ್ತನೆಗಳು 34:14

ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.

ಕೀರ್ತನೆಗಳು 34:15

ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.

ಕೀರ್ತನೆಗಳು 102:28

ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.

ಸಾಮೇತಿಗಳು 16:6

ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.

ಸಾಮೇತಿಗಳು 16:17

ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.

ಯೆಶಾಯ 1:16

ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

1 ತೆಸಲೋನಿಕದವರಿಗೆ 5:15

ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.

2 ತಿಮೋಥೆಯ 2:19

ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ತೀತ 3:8

ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.

ತೀತ 3:14

ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

ಹೆಬ್ರಿಯರಿಗೆ 13:16

ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಹೆಬ್ರಿಯರಿಗೆ 13:21

ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

1 ಯೋಹಾನ 2:16

ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.

Interlinear

Choose Theme