ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
Cross references
ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.