ಕೀರ್ತನೆಗಳು 38:8 · ಕನ್ನಡ ಬೈಬಲ್
ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
Cross references
ಯೋಬ 3:24
ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
ಯೋಬ 30:27
ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
ಯೋಬ 30:28
ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
ಕೀರ್ತನೆಗಳು 22:1
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ಕೀರ್ತನೆಗಳು 32:3
ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
ಯೆಶಾಯ 59:11
ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.