Home Bibles ☰ Books ಕೀರ್ತನೆಗಳು 41:2 · ಕನ್ನಡ ಬೈಬಲ್
ಕೀರ್ತನೆಗಳು 41:2 · ಕನ್ನಡ ಬೈಬಲ್

ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.

Cross references

ದ್ವಿತೀಯೋಪದೇಶಕಾಂಡ 14:29

ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.

ರೂತ 2:19

ಆಗ ಅವಳ ಅತ್ತೆಯು ಆಕೆಗೆ ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಪರಾಮರಿಸಿದವನು ಆಶೀರ್ವದಿಸಲ್ಪಡಲಿ ಅಂದಳು. ಅದಕ್ಕವಳು ತಾನು ಯಾವನ ಹತ್ತಿರ ಕೆಲಸ ಮಾಡಿ ದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ ನಾನು ಈ ಹೊತ್ತು ಕೆಲಸಮಾಡಿದವನ ಹೆಸರು ಬೋವಜ ಎಂದು ಹೇಳಿದಳು.

ಕೀರ್ತನೆಗಳು 27:12

ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.

ಕೀರ್ತನೆಗಳು 33:19

ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.

ಕೀರ್ತನೆಗಳು 37:22

ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.

ಕೀರ್ತನೆಗಳು 37:32

ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.

ಕೀರ್ತನೆಗಳು 91:3

ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.

ಕೀರ್ತನೆಗಳು 128:1

ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.

ಕೀರ್ತನೆಗಳು 140:8

ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.

ಸಾಮೇತಿಗಳು 11:17

ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.

ಸಾಮೇತಿಗಳು 14:21

ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.

ಸಾಮೇತಿಗಳು 19:17

ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.

ಸಾಮೇತಿಗಳು 31:20

ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.

Interlinear

Choose Theme