Home Bibles ಕೀರ್ತನೆಗಳು 41:9 · ಕನ್ನಡ ಬೈಬಲ್
ಕೀರ್ತನೆಗಳು 41:9 · ಕನ್ನಡ ಬೈಬಲ್

ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.

Cross references

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

2 ಸಮುವೇಲ 15:12

ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

ಯೋಬ 19:13

ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.

ಯೋಬ 19:19

ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.

ಕೀರ್ತನೆಗಳು 55:12

ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.

ಕೀರ್ತನೆಗಳು 55:20

ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.

ಕೀರ್ತನೆಗಳು 101:3

ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.

ಯೆರೆಮಿಯ 20:10

ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.

ಒಬದ್ಯ 1:7

ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.

ಮೀಕ 7:5

ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

ಮತ್ತಾಯ 26:23

ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.

ಯೋಹಾನ 13:18

ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.

ಯೋಹಾನ 13:26

ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.

Interlinear

Choose Theme