Psalm
Chapter 43
ಕನ್ನಡ ಬೈಬಲ್1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
4ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
Bible Study with Steffi App
Download Free ↗
Memorize verses with spaced repetition. Free, no ads, 15+ languages.