Home Bibles ಕೀರ್ತನೆಗಳು 44:17 · ಕನ್ನಡ ಬೈಬಲ್
ಕೀರ್ತನೆಗಳು 44:17 · ಕನ್ನಡ ಬೈಬಲ್

ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.

Cross references

ದ್ವಿತೀಯೋಪದೇಶಕಾಂಡ 6:12

ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.

ದ್ವಿತೀಯೋಪದೇಶಕಾಂಡ 8:14

ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,

ಕೀರ್ತನೆಗಳು 9:17

ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.

ಕೀರ್ತನೆಗಳು 44:20

ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ

ಕೀರ್ತನೆಗಳು 78:7

ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು

ಕೀರ್ತನೆಗಳು 78:57

ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.

ಯೆಶಾಯ 17:10

ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.

ಯೆರೆಮಿಯ 2:32

ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

ಯೆರೆಮಿಯ 31:32

ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

ಯೆಹೆಜ್ಕೇಲ 16:59

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.

ಯೆಹೆಜ್ಕೇಲ 20:37

ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.

ದಾನಿಯೇಲ 9:13

ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.

Interlinear

Choose Theme