ಕೀರ್ತನೆಗಳು 48:12 · ಕನ್ನಡ ಬೈಬಲ್
ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
Cross references
ನೆಹೆಮ್ಯ 12:31
ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
ಕೀರ್ತನೆಗಳು 97:8
ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
ಯೆಶಾಯ 33:18
ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
ಮತ್ತಾಯ 24:1
ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.