Home Bibles ಕೀರ್ತನೆಗಳು 49:12 · ಕನ್ನಡ ಬೈಬಲ್
ಕೀರ್ತನೆಗಳು 49:12 · ಕನ್ನಡ ಬೈಬಲ್

ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.

Cross references

ಆದಿಕಾಂಡ 4:17

ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.

ಕೀರ್ತನೆಗಳು 39:5

ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.

ಕೀರ್ತನೆಗಳು 49:20

ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

ಕೀರ್ತನೆಗಳು 82:7

ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.

ಸಭಾಪ್ರಸಂಗಿ 3:18

ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.

ಸಭಾಪ್ರಸಂಗಿ 9:12

ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.

ಯಾಕೋಬ 1:10

ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

1 ಪೇತ್ರ 1:24

ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

Interlinear

Choose Theme