Home Bibles ☰ Books ಕೀರ್ತನೆಗಳು 49:6 · ಕನ್ನಡ ಬೈಬಲ್
ಕೀರ್ತನೆಗಳು 49:6 · ಕನ್ನಡ ಬೈಬಲ್

ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

Cross references

ಎಸ್ತೇರ್ 5:11

ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.

ಯೋಬ 31:24

ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,

ಕೀರ್ತನೆಗಳು 52:7

ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

ಕೀರ್ತನೆಗಳು 56:5

ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.

ಕೀರ್ತನೆಗಳು 56:7

ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.

ಕೀರ್ತನೆಗಳು 62:10

ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.

ಕೀರ್ತನೆಗಳು 112:7

ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.

ಕೀರ್ತನೆಗಳು 112:8

ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.

ಸಾಮೇತಿಗಳು 10:15

ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.

ಸಾಮೇತಿಗಳು 11:28

ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.

ಸಾಮೇತಿಗಳು 23:5

ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.

ಯೆರೆಮಿಯ 9:23

ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

ಯೆಹೆಜ್ಕೇಲ 28:4

ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.

ಹೊಶೇಯ 12:8

ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.

Interlinear

Choose Theme