ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
Cross references
ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.