Home Bibles ಕೀರ್ತನೆಗಳು 51:7 · ಕನ್ನಡ ಬೈಬಲ್
ಕೀರ್ತನೆಗಳು 51:7 · ಕನ್ನಡ ಬೈಬಲ್

ಹಿಸ್ಸೋಪ್‌ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.

Cross references

ನಿರ್ಗಮಕಾಂಡ 12:22

ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.

ಲೇವ್ಯಕಾಂಡ 14:4

ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.

ಲೇವ್ಯಕಾಂಡ 14:49

ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.

ಅಂಕೆಗಳ ಪುಸ್ತಕ 19:18

ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.

ಯೋಬ 14:4

ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.

ಕೀರ್ತನೆಗಳು 58:4

ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ.

ಯೆಶಾಯ 1:18

ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

ಯೋಹಾನ 13:9

ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು.

ಎಫೆಸದವರಿಗೆ 5:26

ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ

ಹೆಬ್ರಿಯರಿಗೆ 9:13

ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ

ಹೆಬ್ರಿಯರಿಗೆ 9:19

ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--

1 ಯೋಹಾನ 1:7

ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

ಪ್ರಕಟನೆ 1:5

ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

ಪ್ರಕಟನೆ 7:13

ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.

Interlinear

Choose Theme