ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
Cross references
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ.
ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.