Home Bibles ☰ Books ಕೀರ್ತನೆಗಳು 53:3 · ಕನ್ನಡ ಬೈಬಲ್
ಕೀರ್ತನೆಗಳು 53:3 · ಕನ್ನಡ ಬೈಬಲ್

ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.

Cross references

2 ಸಮುವೇಲ 20:2

ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.

ಯೋಬ 15:16

ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!

ಕೀರ್ತನೆಗಳು 14:3

ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ಯೆಶಾಯ 64:6

ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.

ಯೆರೆಮಿಯ 8:5

ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಸೆಫನ್ಯ 1:6

ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.

ರೋಮಾಪುರದವರಿಗೆ 3:12

ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.

2 ಕೊರಿಂಥದವರಿಗೆ 7:1

ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.

1 ಯೋಹಾನ 2:29

ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

3 ಯೋಹಾನ 1:11

ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

Interlinear

Choose Theme