Home Bibles ಕೀರ್ತನೆಗಳು 55:15 · ಕನ್ನಡ ಬೈಬಲ್
ಕೀರ್ತನೆಗಳು 55:15 · ಕನ್ನಡ ಬೈಬಲ್

ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.

Cross references

ಅಂಕೆಗಳ ಪುಸ್ತಕ 16:30

ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.

2 ಸಮುವೇಲ 17:23

ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.

2 ಸಮುವೇಲ 18:9

ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.

2 ಸಮುವೇಲ 18:14

ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.

ಕೀರ್ತನೆಗಳು 9:17

ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.

ಕೀರ್ತನೆಗಳು 59:13

ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.

ಕೀರ್ತನೆಗಳು 64:7

ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.

ಕೀರ್ತನೆಗಳು 69:22

ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

ಕೀರ್ತನೆಗಳು 109:6

ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.

ಮತ್ತಾಯ 26:24

ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

ಮತ್ತಾಯ 27:5

ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

ಅಪೋಸ್ತಲರ ಕೃತ್ಯಗಳು 1:18

ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.

ಅಪೋಸ್ತಲರ ಕೃತ್ಯಗಳು 1:25

ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.

Interlinear

Choose Theme