Home Bibles ಕೀರ್ತನೆಗಳು 59:7 · ಕನ್ನಡ ಬೈಬಲ್
ಕೀರ್ತನೆಗಳು 59:7 · ಕನ್ನಡ ಬೈಬಲ್

ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.

Cross references

ಯೋಬ 22:12

ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!

ಕೀರ್ತನೆಗಳು 10:11

ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

ಕೀರ್ತನೆಗಳು 10:13

ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.

ಕೀರ್ತನೆಗಳು 55:21

ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.

ಕೀರ್ತನೆಗಳು 57:4

ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.

ಕೀರ್ತನೆಗಳು 64:3

ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.

ಕೀರ್ತನೆಗಳು 73:11

ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.

ಕೀರ್ತನೆಗಳು 94:4

ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;

ಕೀರ್ತನೆಗಳು 94:7

ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.

ಕೀರ್ತನೆಗಳು 109:2

ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.

ಸಾಮೇತಿಗಳು 12:18

ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.

ಸಾಮೇತಿಗಳು 15:2

ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.

ಸಾಮೇತಿಗಳು 15:28

ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.

ವಿಲಾಪಗಳು 3:62

ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿ.

ಮತ್ತಾಯ 12:34

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

Interlinear

Choose Theme