ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
Cross references
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.
ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.