Home Psalm 66 · ಕನ್ನಡ ಬೈಬಲ್

Psalm

Chapter 66

ಕನ್ನಡ ಬೈಬಲ್
1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
2ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
7ಆತನು ತನ್ನ ಪರಾಕ್ರಮ ದಿಂದ ಎಂದೆಂದಿಗೂ ಆಳುವವನಾಗಿದ್ದಾನೆ; ಆತನ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ಎದುರು ಬೀಳುವವರು ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳದೆ ಇರಲಿ. ಸೆಲಾ.
8ಓ ಜನರೇ, ನೀವು ದೇವರನ್ನು ಸ್ತುತಿಸಿರಿ; ಆತನ ಸ್ತೊತ್ರದ ಸ್ವರವು ಕೇಳಲ್ಪಡುವಂತೆ ಮಾಡಿರಿ.
9ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
10ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
11ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
12ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
13ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
17ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
19ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
20ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme