Home Bibles ☰ Books ಕೀರ್ತನೆಗಳು 66:19 · ಕನ್ನಡ ಬೈಬಲ್
ಕೀರ್ತನೆಗಳು 66:19 · ಕನ್ನಡ ಬೈಬಲ್

ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

Cross references

1 ಅರಸುಗಳು 9:3

ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.

ಕೀರ್ತನೆಗಳು 6:9

ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.

ಕೀರ್ತನೆಗಳು 34:6

ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.

ಕೀರ್ತನೆಗಳು 116:1

ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.

ವಿಲಾಪಗಳು 3:55

ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.

ವಿಲಾಪಗಳು 3:56

ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.

ಹೆಬ್ರಿಯರಿಗೆ 5:7

ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.

1 ಯೋಹಾನ 3:20

ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.

Interlinear

Choose Theme