Home Bibles ಕೀರ್ತನೆಗಳು 66:20 · ಕನ್ನಡ ಬೈಬಲ್
ಕೀರ್ತನೆಗಳು 66:20 · ಕನ್ನಡ ಬೈಬಲ್

ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.

Cross references

2 ಸಮುವೇಲ 7:14

ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.

ಕೀರ್ತನೆಗಳು 22:24

ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.

ಕೀರ್ತನೆಗಳು 31:22

ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.

ಕೀರ್ತನೆಗಳು 51:11

ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.

ಕೀರ್ತನೆಗಳು 68:35

ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.

ಕೀರ್ತನೆಗಳು 86:12

ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.

Interlinear

Choose Theme