ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
Cross references
ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.