Psalm
Chapter 69
ಕನ್ನಡ ಬೈಬಲ್1ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
2ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
4ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
5ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.
6ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
7ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
10ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
11ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.
12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
14ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
16ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.
17ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
18ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.
19ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
20ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
21ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
24ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
25ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.
26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
27ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.
28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
29ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
30ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
34ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
35ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
36ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
Bible Study with Steffi App
Download Free ↗
Memorize verses with spaced repetition. Free, no ads, 15+ languages.