Home Bibles ☰ Books ಕೀರ್ತನೆಗಳು 70:2 · ಕನ್ನಡ ಬೈಬಲ್
ಕೀರ್ತನೆಗಳು 70:2 · ಕನ್ನಡ ಬೈಬಲ್

ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.

Cross references

ಕೀರ್ತನೆಗಳು 6:10

ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.

ಕೀರ್ತನೆಗಳು 22:12

ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.

ಕೀರ್ತನೆಗಳು 22:20

ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.

ಕೀರ್ತನೆಗಳು 35:4

ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.

ಕೀರ್ತನೆಗಳು 35:26

ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.

ಕೀರ್ತನೆಗಳು 40:14

ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.

ಕೀರ್ತನೆಗಳು 71:12

ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.

ಕೀರ್ತನೆಗಳು 71:13

ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.

ಕೀರ್ತನೆಗಳು 109:29

ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.

ಕೀರ್ತನೆಗಳು 141:1

ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.

ಯೆಶಾಯ 28:13

ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.

ಯೆಶಾಯ 41:11

ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;

ಯೋಹಾನ 18:6

ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.

Interlinear

Choose Theme