Home Bibles ಕೀರ್ತನೆಗಳು 71:20 · ಕನ್ನಡ ಬೈಬಲ್
ಕೀರ್ತನೆಗಳು 71:20 · ಕನ್ನಡ ಬೈಬಲ್

ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.

Cross references

1 ಸಮುವೇಲ 2:6

ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.

2 ಸಮುವೇಲ 12:11

ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.

ಕೀರ್ತನೆಗಳು 16:10

ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಕೀರ್ತನೆಗಳು 40:1

ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.

ಕೀರ್ತನೆಗಳು 60:3

ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.

ಕೀರ್ತನೆಗಳು 60:5

ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.

ಕೀರ್ತನೆಗಳು 66:10

ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.

ಕೀರ್ತನೆಗಳು 80:18

ಆಗ ನಾವು ನಿನ್ನಿಂದ ಹಿಂದಿರು ಗುವದಿಲ್ಲ; ನಮ್ಮನ್ನು ಬದುಕಿಸು, ಆಗ ನಿನ್ನ ಹೆಸರನ್ನು ಕರೆಯುವೆವು.ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.

ಕೀರ್ತನೆಗಳು 85:6

ನಿನ್ನ ಜನರು ನಿನ್ನಲ್ಲಿ ಸಂತೋಷ ಪಡುವ ಹಾಗೆ ನೀನು ತಿರುಗಿ ನಮ್ಮನ್ನು ಉಜ್ಜೀವಿ ಸುವದಿಲ್ಲವೋ?

ಕೀರ್ತನೆಗಳು 86:13

ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.

ಕೀರ್ತನೆಗಳು 88:6

ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

ಕೀರ್ತನೆಗಳು 95:4

ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.

ಕೀರ್ತನೆಗಳು 119:25

ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.

ಕೀರ್ತನೆಗಳು 138:7

ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.

ಯೆಶಾಯ 26:19

ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

ಯೆಶಾಯ 38:17

ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.

ಯೆಹೆಜ್ಕೇಲ 37:12

ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್‌ ದೇಶಕ್ಕೆ ನಿಮ್ಮನ್ನು ತರುವೆನು.

ಹೊಶೇಯ 6:1

ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.

ಯೋನ 2:6

ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.

ಮಾರ್ಕ 14:33

ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--

ಮಾರ್ಕ 15:34

ಒಂಭತ್ತ ನೆಯ ತಾಸಿನಲ್ಲಿ ಯೇಸು--ಎಲೋಹಿ, ಎಲೋಹಿ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.

ಅಪೋಸ್ತಲರ ಕೃತ್ಯಗಳು 2:24

ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.

ಅಪೋಸ್ತಲರ ಕೃತ್ಯಗಳು 2:32

ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.

2 ಕೊರಿಂಥದವರಿಗೆ 11:23

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

ಎಫೆಸದವರಿಗೆ 4:9

(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?

ಪ್ರಕಟನೆ 7:14

ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.

Interlinear

Choose Theme