ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
Cross references
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಮನುಷ್ಯ ಪುತ್ರನೇ, ನಾನು ಐಗುಪ್ತದ ಅರಸ ನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ; ಇಗೋ, ಅದು ಕಟ್ಟಲ್ಪಡುವ ಹಾಗೆ ವಾಸಿಯಾಗುವದೇ ಇಲ್ಲ, ಅದು ಕತ್ತಿಯನ್ನು ಹಿಡಿಯುವ ಹಾಗೆಯೇ ಅದಕ್ಕೆ ಬಲಬರುವ ಹಾಗೆ ಪಟ್ಟಿ ಬಿಗಿಸಲ್ಪಡುವದಿಲ್ಲ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;