Home Bibles ಕೀರ್ತನೆಗಳು 77:13 · ಕನ್ನಡ ಬೈಬಲ್
ಕೀರ್ತನೆಗಳು 77:13 · ಕನ್ನಡ ಬೈಬಲ್

ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?

Cross references

ನಿರ್ಗಮಕಾಂಡ 15:11

ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?

ದ್ವಿತೀಯೋಪದೇಶಕಾಂಡ 32:31

ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.

ಕೀರ್ತನೆಗಳು 27:4

ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.

ಕೀರ್ತನೆಗಳು 63:2

ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.

ಕೀರ್ತನೆಗಳು 68:25

ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.

ಕೀರ್ತನೆಗಳು 71:19

ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!

ಕೀರ್ತನೆಗಳು 73:17

ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.

ಕೀರ್ತನೆಗಳು 86:8

ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.

ಕೀರ್ತನೆಗಳು 89:6

ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?

ಕೀರ್ತನೆಗಳು 105:2

ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.

ಕೀರ್ತನೆಗಳು 119:27

ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.

ಯೆಶಾಯ 40:18

ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?

ಯೆಶಾಯ 40:25

ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.

ಯೆಶಾಯ 46:5

ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?

Interlinear

Choose Theme