Home Bibles ಕೀರ್ತನೆಗಳು 78:21 · ಕನ್ನಡ ಬೈಬಲ್
ಕೀರ್ತನೆಗಳು 78:21 · ಕನ್ನಡ ಬೈಬಲ್

ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.

Cross references

ಅಂಕೆಗಳ ಪುಸ್ತಕ 11:1

ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.

ಅಂಕೆಗಳ ಪುಸ್ತಕ 11:3

ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.

ಅಂಕೆಗಳ ಪುಸ್ತಕ 11:10

ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.

ದ್ವಿತೀಯೋಪದೇಶಕಾಂಡ 32:22

ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.

ಕೀರ್ತನೆಗಳು 78:31

ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.

ಯೆಶಾಯ 63:10

ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.

1 ಕೊರಿಂಥದವರಿಗೆ 10:5

ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

1 ಕೊರಿಂಥದವರಿಗೆ 10:11

ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

ಹೆಬ್ರಿಯರಿಗೆ 12:29

ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಯೂದ 1:5

ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

Interlinear

Choose Theme