Home Bibles ಕೀರ್ತನೆಗಳು 78:43 · ಕನ್ನಡ ಬೈಬಲ್
ಕೀರ್ತನೆಗಳು 78:43 · ಕನ್ನಡ ಬೈಬಲ್

ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್‌ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.

Cross references

ನಿರ್ಗಮಕಾಂಡ 3:19

ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

ನಿರ್ಗಮಕಾಂಡ 4:21

ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.

ನಿರ್ಗಮಕಾಂಡ 7:3

ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

ದ್ವಿತೀಯೋಪದೇಶಕಾಂಡ 4:34

ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?

ದ್ವಿತೀಯೋಪದೇಶಕಾಂಡ 6:22

ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.

ನೆಹೆಮ್ಯ 9:10

ಫರೋಹನ ಮೇಲೆಯೂ ಅವನ ಸಮಸ್ತ ಸೇವಕರ ಮೇಲೆಯೂ ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚ ಕಕಾರ್ಯಗಳನ್ನೂ ಅದ್ಭುತಗಳನ್ನೂ ತೋರಿಸಿದಿ. ಯಾಕಂದರೆ ಇವರು ಅವರಿಗೆ ಅಹಂಕಾರಿಗಳಾಗಿ ನಡೆದರೆಂದು ತಿಳಿದಿದ್ದಿ. ಈ ಪ್ರಕಾರವೇ ನೀನು ಇಂದಿನ ಹಾಗೆ ನಿನಗೆ ಹೆಸರನ್ನು ಮಾಡಿಕೊಂಡಿದ್ದೀ.

ಕೀರ್ತನೆಗಳು 78:12

ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್‌ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.

ಕೀರ್ತನೆಗಳು 105:27

ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.

ಕೀರ್ತನೆಗಳು 135:9

ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.

ಅಪೋಸ್ತಲರ ಕೃತ್ಯಗಳು 7:7

ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.

Interlinear

Choose Theme