ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
Cross references
ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.