Psalm
Chapter 8
ಕನ್ನಡ ಬೈಬಲ್1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
3ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ
4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
5ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
6ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
7ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ
8ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
9ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
Bible Study with Steffi App
Download Free ↗
Memorize verses with spaced repetition. Free, no ads, 15+ languages.