ಅಡವಿಯಿಂದ ಬಂದ ಹಂದಿಯು ಅದನ್ನು ಹಾಳುಮಾಡುತ್ತದೆ ಕಾಡಿನ ಮೃಗವು ಅದನ್ನು ಮೇಯ್ದು ಬಿಡುತ್ತದೆ.
Cross references
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಈ ಕಾರ್ಯಗಳೂ ಇವುಗಳ ಸ್ಥಾಪನೆಯೂ ಆದ ತರುವಾಯ ಅಶ್ಶೂರಿನ ಅರಸನಾದ ಸನ್ಹೇರೀಬನು ಹೊರಟು ಬಂದು ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿದು ಅವುಗಳನ್ನು ತನಗಾಗಿ ಜಯಿಸಬೇಕೆಂದು ಅಂದುಕೊಂಡನು.
ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.