ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
Cross references
ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.
ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.