ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
ತನ್ನನ್ನು ಹಗೆ ಮಾಡುವವರಿಗೆ ಮುಖಾಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸಿ ಅವರನ್ನು ನಾಶಮಾಡುತ್ತಾನೆ; ಆತನು ತನ್ನನ್ನು ಹಗೆಮಾಡುವವರಿಗೆ ತಡಮಾಡದೆ ಮುಖಾ ಮುಖಿಯಾಗಿ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ ಎಂದು ತಿಳಿದುಕೋ.
ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು.
ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.