Home Bibles ಕೀರ್ತನೆಗಳು 81:7 · ಕನ್ನಡ ಬೈಬಲ್
ಕೀರ್ತನೆಗಳು 81:7 · ಕನ್ನಡ ಬೈಬಲ್

ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.

Cross references

ನಿರ್ಗಮಕಾಂಡ 2:23

ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.

ನಿರ್ಗಮಕಾಂಡ 6:6

ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ

ನಿರ್ಗಮಕಾಂಡ 14:10

ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.

ನಿರ್ಗಮಕಾಂಡ 14:24

ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ

ನಿರ್ಗಮಕಾಂಡ 14:30

ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ನಿರ್ಗಮಕಾಂಡ 17:2

ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.

ನಿರ್ಗಮಕಾಂಡ 19:19

ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.

ನಿರ್ಗಮಕಾಂಡ 20:2

ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.

ನಿರ್ಗಮಕಾಂಡ 20:18

ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.

ಅಂಕೆಗಳ ಪುಸ್ತಕ 20:13

ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.

ಅಂಕೆಗಳ ಪುಸ್ತಕ 20:24

ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.

ದ್ವಿತೀಯೋಪದೇಶಕಾಂಡ 5:6

ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 33:8

ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

ಕೀರ್ತನೆಗಳು 50:15

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

ಕೀರ್ತನೆಗಳು 91:14

ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.

ಯೆರೆಮಿಯ 16:14

ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.

Interlinear

Choose Theme