Home Bibles ಕೀರ್ತನೆಗಳು 82:2 · ಕನ್ನಡ ಬೈಬಲ್
ಕೀರ್ತನೆಗಳು 82:2 · ಕನ್ನಡ ಬೈಬಲ್

ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.

Cross references

ನಿರ್ಗಮಕಾಂಡ 10:3

ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.

ನಿರ್ಗಮಕಾಂಡ 23:6

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

ಲೇವ್ಯಕಾಂಡ 19:15

ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.

ದ್ವಿತೀಯೋಪದೇಶಕಾಂಡ 1:17

ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.

1 ಅರಸುಗಳು 18:21

ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.

2 ದಿನವೃತ್ತಾಂತ 19:7

ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.

ಯೋಬ 32:21

ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?

ಯೋಬ 34:19

ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.

ಕೀರ್ತನೆಗಳು 58:1

ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?

ಕೀರ್ತನೆಗಳು 62:3

ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.

ಸಾಮೇತಿಗಳು 18:5

ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.

ಯೆಹೆಜ್ಕೇಲ 45:9

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಮೀಕ 3:1

ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?

ಮೀಕ 3:9

ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,

ಮತ್ತಾಯ 17:17

ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

ಗಲಾತ್ಯದವರಿಗೆ 2:6

ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.

Interlinear

Choose Theme