ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
Cross references
ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.
ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.