ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
Cross references
ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನಿನ ಬಳಿಗೆ ಬರಮಾಡಿ ಅವನನ್ನು ನಿನ್ನ ಕೈ ಯಲ್ಲಿ ಒಪ್ಪಿಸಿಕೊಡುವೆನು ಅಂದಳು.
ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.
ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.