Home Bibles ಕೀರ್ತನೆಗಳು 84:11 · ಕನ್ನಡ ಬೈಬಲ್
ಕೀರ್ತನೆಗಳು 84:11 · ಕನ್ನಡ ಬೈಬಲ್

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

Cross references

ಆದಿಕಾಂಡ 15:1

ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

ದ್ವಿತೀಯೋಪದೇಶಕಾಂಡ 18:2

ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.

ಕೀರ್ತನೆಗಳು 3:3

ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.

ಕೀರ್ತನೆಗಳು 15:2

ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.

ಕೀರ್ತನೆಗಳು 27:1

ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?

ಕೀರ್ತನೆಗಳು 34:9

ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

ಕೀರ್ತನೆಗಳು 47:9

ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.

ಕೀರ್ತನೆಗಳು 84:9

ನಮ್ಮ ಗುರಾಣಿಯಾಗಿರುವ ಓ ದೇವರೇ, ನೋಡು; ನಿನ್ನ ಅಭಿಷಿಕ್ತನ ಮುಖವನ್ನು ದೃಷ್ಟಿಸು.

ಕೀರ್ತನೆಗಳು 85:12

ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.

ಕೀರ್ತನೆಗಳು 115:9

ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.

ಕೀರ್ತನೆಗಳು 119:114

ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.

ಸಾಮೇತಿಗಳು 2:7

ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.

ಸಾಮೇತಿಗಳು 10:9

ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.

ಸಾಮೇತಿಗಳು 28:6

ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.

ಸಾಮೇತಿಗಳು 28:18

ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.

ಯೆಶಾಯ 60:19

ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.

ಮೀಕ 2:7

ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?

ಮಲಾಕಿ 4:2

ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಯೋಹಾನ 1:9

ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.

ಯೋಹಾನ 1:16

ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ಯೋಹಾನ 8:12

ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

ರೋಮಾಪುರದವರಿಗೆ 8:16

ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.

2 ಕೊರಿಂಥದವರಿಗೆ 3:18

ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

2 ಕೊರಿಂಥದವರಿಗೆ 4:17

ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

ಗಲಾತ್ಯದವರಿಗೆ 2:14

ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ

ಫಿಲಿಪ್ಪಿಯವರಿಗೆ 1:6

ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.

ಫಿಲಿಪ್ಪಿಯವರಿಗೆ 4:19

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

ಪ್ರಕಟನೆ 21:23

ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.

Interlinear

Choose Theme