Home Bibles ಕೀರ್ತನೆಗಳು 86 · ಕನ್ನಡ ಬೈಬಲ್ ||

ಕೀರ್ತನೆಗಳು

Chapter 86

ಕನ್ನಡ ಬೈಬಲ್
1ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ. 2ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು. 3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ. 4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ. 6ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು. 7ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ. 8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. 9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. 10ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು. 11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು. 12ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. 13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ. 14ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ. 15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ. 16ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು.ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ. 17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.

Choose Theme