Home Bibles ☰ Books ಕೀರ್ತನೆಗಳು 89:11 · ಕನ್ನಡ ಬೈಬಲ್
ಕೀರ್ತನೆಗಳು 89:11 · ಕನ್ನಡ ಬೈಬಲ್

ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.

Cross references

ಆದಿಕಾಂಡ 1:1

ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

ಆದಿಕಾಂಡ 2:1

ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.

1 ದಿನವೃತ್ತಾಂತ 29:11

ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.

ಯೋಬ 38:18

ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.

ಯೋಬ 41:11

ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.

ಕೀರ್ತನೆಗಳು 24:1

ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಕೀರ್ತನೆಗಳು 50:12

ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.

ಕೀರ್ತನೆಗಳು 115:16

ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.

ಯೆಶಾಯ 51:9

ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

1 ಕೊರಿಂಥದವರಿಗೆ 10:26

ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?

1 ಕೊರಿಂಥದವರಿಗೆ 10:28

ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?

Interlinear

Choose Theme